×
Ad

ಕೊಳ್ಳೇಗಾಲ | ವಡಕೆಹಳ್ಳ ಅರಣ್ಯ ಪ್ರದೇಶದಲ್ಲಿ ಕಾಡಾನೆಯ ಕಳೇಬರ ಪತ್ತೆ

Update: 2025-08-28 17:28 IST

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯಜೀವಿಯ ವಲಯ ವ್ಯಾಪ್ತಿಯ ವಡಕೆಹಳ್ಳ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಮೃತಪಟ್ಟಿದೆ.

ಕೊಳ್ಳೇಗಾಲ ವನ್ಯಜೀವಿ ವಲಯ ಅರೆಪಾಳ್ಯ ಶಾಖೆಯ ಉಪವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಸ್ತು ಮಾಡುತ್ತಿರುವಾಗ ಆನೆ ಮೃತಪಟ್ಟಿರುವುದು ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಬಂದ ಉಪಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಶ್ರೀಪತಿ ಬಿ.ಎಸ್, ಪಶುವೈದ್ಯಾಧಿಕಾರಿಗಳಾದ ಡಾ ಶಿವಕುಮಾರ್, ಡಾ ಶಿವರಾಜ್, ಮೈಸೂರು ಮೃಗಾಲಯದ ಪಶು ವೈದ್ಯಾಧಿಕಾರಿಗಳಾದ ಡಾ. ಮಸಿಯಪ್ಪ, ಪ್ರಕಾಶ್ಕರ್ ಅಕ್ಷಯ ಅಶೋಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಾಸು ಬಿ. ಎಸ್. ವಲಯ ಅರಣ್ಯಾಧಿಕಾರಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು.

ಮೃತ ಆನೆಗೆ ಅಂದಾಜು 25 ವರ್ಷ ಇದ್ದು, ಎರಡು ದಂತಗಳನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಂಡಿದೆ.

ಪಶುವೈದ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಸದರಿಯ ಆನೆಯ ವಿವಿಧ ಅಂಗಾಂಶಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು. ಮೇಲ್ನೋಟಕ್ಕೆ ಆನೆಯು ಸಹಜವಾಗಿ ಮೃತಪಟ್ಟಿದ್ದು, ವರದಿ ಬಂದ ನಂತರ ಆನೆಯ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬರಲಿದೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News