×
Ad

78ನೇ ಸ್ವಾತಂತ್ರ್ಯೋತ್ಸವ | ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್

Update: 2024-08-15 12:05 IST

ಚಾಮರಾಜನಗರ : ಚಾಮರಾಜನಗರ ಜಿಲ್ಲಾ ಕೇಂದ್ರದ ಪೊಲೀಸ್ ಪೆರೇಡ್ ಗ್ರೌಂಡ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಪಿತ ಮಹತ್ಮಾಗಾಂಧಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಇದಕ್ಕೂ ಮುನ್ನಾ ವಿವಿಧ ತಂಡಗಳಿಂದ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಸಂಸದ ಸುನಿಲ್ ಭೋಸ್, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾಧಿಕಾರಿ ಶಿಲ್ಪನಾಗ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಬಿ.ಟಿ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News