×
Ad

ಚಾಮರಾಜನಗರ | ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Update: 2026-02-21 18:07 IST

ಚಾಮರಾಜನಗರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 3 ವರ್ಷದ ಹೆಣ್ಣು ಚಿರತೆಯೊಂದು ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಮಣಗಳ್ಳಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಬಂಡೀಪುರ ರಸ್ತೆಯಲ್ಲಿರುವ ಮಣಗಳ್ಳಿಯ ರೈತ ನಾಗರಾಜು ಎಂಬುವವರ ಜಮೀನಿನಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಕಳೆದ ಗುರುವಾರ ರಾತ್ರಿ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ನಂತರ ರೈತರ ಒತ್ತಾಯದ ಮೇರೆಗೆ ಬಫರ್ ವಲಯದ ಅರಣ್ಯ ಸಿಬ್ಬಂದಿ ನಾಗರಾಜು ಎಂಬವರ ಜಮೀನಿನಲ್ಲಿ ಬೋನು ಇರಿಸಿದ್ದರು.

ಬೇಟೆಯಾಸೆಗೆ ಬ೦ದ ಸುಮಾರು 3 ವರ್ಷದ ಹೆಣ್ಣು ಚಿರತೆ ಶನಿವಾರ ಬೆಳಗ್ಗೆ ಬೋನಿಗೆ ಬಿದ್ದಿದೆ. ಇದನ್ನು ಸ್ಥಳೀಯ ರೈತರು ಗಮನಿಸಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಫರ್ ವಲಯದ ಆರ್‌ಎಫ್‌ಒ ಶಿವಕುಮಾರ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಚಿರತೆಯನ್ನು ಮೂಲೆಹೊಳೆ ದಟ್ಟಾರಣ್ಯದ ಮಧ್ಯ ಭಾಗದಲ್ಲಿ ಬಿಟ್ಟು ಬಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News