×
Ad

ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು ನಿಧನ

Update: 2025-05-12 21:15 IST

ಚಾಮರಾಜನಗರ/ ಯಳಂದೂರು : ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿರವರ ಹಿರಿಯ ಪುತ್ರ ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಪಿ. ಚಾಮರಾಜು (42) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜು ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತ ಚಾಮರಾಜು ಅವರು ತಂದೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ತಾಯಿ ವೆಂಕಟಮ್ಮ, ಸಹೋದರ ಟಿಎಪಿಸಿಎಂಎಸ್ ಉಪಾಧ್ಯಕ್ಷ ಕುಸುಮರಾಜು, ಪತ್ನಿ ಸುಪ್ರಿಯಾ ಸೇರಿದಂತೆ ಓರ್ವ ಪುತ್ರ, ಓರ್ವ ಪುತ್ರಿ, ಇಬ್ಬರು ಸಹೋದರಿಯರೂ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯು ತಾಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿರುವ ಇವರ ಜಮೀನಿನಲ್ಲಿ ಮಂಗಳವಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News