×
Ad

ಕೊಳ್ಳೇಗಾಲ | ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾಯಿ ಆತ್ಮಹತ್ಯೆಗೆ ಯತ್ನ: ಓರ್ವ ಬಾಲಕಿ ಮೃತ್ಯು

Update: 2023-07-12 15:31 IST
ಸಾಂದರ್ಭಿಕ ಚಿತ್ರ

ಕೊಳ್ಳೇಗಾಲ, ಜು.12: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ತನ್ನಿಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ವಿಷಪ್ರಾಶನಕ್ಕೊಳಗಾದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

ತಾಲೂಕಿನ ಮಧುವನಹಳ್ಳಿ ಗ್ರಾಮದ ಶೀಲಾ ಎಂಬವರು ತನ್ನ ಇಬ್ಬರು ಮಕ್ಕಳಾದ ಯಶವಂತ್(8) ಹಾಗೂ ಸಿಂಧೂ (6)ವಿಗೆ ವಿಷವಿಕ್ಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಿಂಧೂ ಮೃತಪಟ್ಟಿದ್ದಾಳೆ. ಗಂಭೀರಾವಸ್ಥೆಯಲ್ಲಿರುವ ಶೀಲಾ ಹಾಗೂ ಯಶವಂತ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ಯಪಾನಿಯಾಗಿರುವ ಪತಿಯ ಕಿರಿಕಿರಿ ತಾಳಲಾರದೆ ಶೀಲಾ ಈ ಕೃತ್ಯ ಎಸಗಿದ್ದಾರೆನ್ನಲಾಗಿದೆ.

ಈ ಬಗ್ಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News