×
Ad

ಗುಂಡ್ಲುಪೇಟೆ: ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Update: 2023-09-15 09:55 IST

ಚಾಮರಾಜನಗರ, ಸೆ.15: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಮೇಘಾ(24), ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಎಂದು ಗುರುತಿಸಲಾಗಿದೆ. ಪತಿ ಧನಂಜಯ ಮತ್ತು ಮನೆಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ. ಇದರಿಂದ ಬೇಸತ್ತು ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಧನಂಜಯ ಮತ್ತು ಮೇಘಾ ಎಂಟು ವರ್ಷಗಳ ಹಿಂದೆ ವಿವಾಹಿತರಾಗಿದ್ದು, ಪ್ರಾರಂಭದ ದಿನಗಳಿಂದಲೂ ಕುಟುಂಬದವರೆಲ್ಲಾ ಸೇರಿ ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೇಘಾ ಮನೆಮಂದಿ ಆರೋಪಿಸಿದ್ದಾರೆ.

ಗುರುವಾರ ಬೆಳಿಗ್ಗೆಯಿಂದಲೂ ಮನೆಯಲ್ಲಿ ಗಲಾಟೆ ನಡೆದಿತ್ತು ಎಂಬುದು ಮೇಘಾ ಅವರ ಮೊಬೈಲ್ ಫೋನ್ ನಲ್ಲಿ ರೆಕಾರ್ಡ್ ಆಗಿರುವ ವೀಡಿಯೋ ದಾಖಲೆ ಪೊಲೀಸರಿಗೆ ದೊರತಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News