×
Ad

ಚಾಮರಾಜನಗರ | ಬೈಲೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ; ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಗಾಹುತಿ

Update: 2024-04-22 19:06 IST

ಚಾಮರಾಜನಗರ : ಹನೂರು ತಾಲ್ಲೂಕಿನ ಬಿ.ಆರ್.ಟಿ ವನ್ಯಧಾಮ ವ್ಯಾಪ್ತಿಯ ಬೈಲೂರು ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಗಾಹುತಿಯಾಗಿರುವ ಘಟನೆ ವರದಿಯಾಗಿದೆ.

ಬಿ.ಆರ್.ಟಿ ವನ್ಯಜೀವಿ ವಿಭಾಗ ಬೈಲೂರು ವಲಯದ 40ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸಮೀಪದ ಪುಣಜೂರು ಅರಣ್ಯ ವ್ಯಾಪ್ತಿಯ 30ಕ್ಕೂ ಹೆಚ್ಚು ಸಿಬ್ಬಂದಿ ಸತತವಾಗಿ ಕೆಲ ತಾಸುಗಳ ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News