×
Ad

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು

Update: 2024-10-24 10:10 IST

ಮಲ್ಲೇಶ್ | ನಾಗೇಂದ್ರ

ಚಾಮರಾಜನಗರ: ಜಮೀನಿಗೆ ತೆರಳುವಾಗ ಹಠತ್ತಾಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ ಧಾರಣ ಘಟನೆ ಚಾಮರಾಜನಗರ ತಾಲ್ಲೂಕಿನ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರ ಗ್ರಾಮದ ಹೊರ ವಲಯದಲ್ಲಿರುವ ಜಮೀನಿಗೆ ನಾಗೇಂದ್ರ ಮತ್ತು ಮಲ್ಲೇಶ್ ರವರು ಬೈಕ್ ನಲ್ಲಿ ಬುಧವಾರ ರಾತ್ರಿ ತೆರಳುವಾಗ ಹಠತ್ತಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಹರಿದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ರಾಮಸಮುದ್ರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿದ್ದಾರೆ.

ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News