×
Ad

ಬಂಡೀಪುರ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ; ಪೂರ್ವನಿಯೋಜಿತ ಕೃತ್ಯ : ಎಸ್ಪಿ ಕವಿತಾ

Update: 2025-11-23 14:11 IST

ಚಾಮರಾಜನಗರ:  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವನ್ಯಜೀವಿ ವಲಯದಲ್ಲಿ ನಡೆದಿರುವ ದರೋಡೆ ಪ್ರಕರಣ ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕವಿತಾ ಅವರು ತಿಳಿಸಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮದ್ದೂರು ವಲಯದಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು.

"ಕೇರಳದ ಕ್ಯಾಲಿಕಟ್ ನಿವಾಸಿಗಳಾದ ವಿನು ಹಾಗೂ ಸಮೀರ್ ಎಂಬವರು ಆಭರಣ ತಯಾರಿಸಲು ಮಂಡ್ಯದ ರಾಜೇಶ್ ಜ್ಯುವೆಲರ್ಸ್ ಮಾಲೀಕರಿಂದ 800 ಗ್ರಾಂ ಚಿನ್ನದ ಗಟ್ಟಿ ಹಾಗೂ 518 ಗ್ರಾಂ 22 ಕ್ಯಾರಟ್ ಬಂಗಾರವನ್ನು ಬಂಡೀಪುರ ಮೂಲೆಹೊಳೆ ಮಾರ್ಗವಾಗಿ ಕೇರಳಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಎರಡು ಇನೋವಾ ಹಾಗೂ 1 ಇಟಿಯೋಸ್ ಕಾರಿನಲ್ಲಿ ಬಂದ ದರೋಡೆಕೋರರು ಮೊಬೈಲ್ ನೆಟ್ವರ್ಕ್ ಸಿಗದ ಸ್ಥಳದಲ್ಲಿ ಅಡ್ಡಗಟ್ಟಿ ಬಂಗಾರ ಅಪಹರಿಸಿದ್ದಾರೆ. ದೂರುದಾರ ವಿನು ಹತ್ತರಿಂದ 12 ಮಂದಿ ಇದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದರೊಡೆಕೋರರ ಪತ್ತೆಗಾಗಿ ಐದು ಜನ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News