ಚಾಮರಾಜನಗರ | ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಾರಿಮಧ್ಯೆ ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಚಾಮರಾಜನಗರ : ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.
ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಪುರುಷೊತ್ತಮ್ ಹೆಣ್ಣು ಮಗುವಿಗೆ ಜನ್ಮ ನೀಡಿದವರು.
ಶಿಲ್ಪಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆ್ಯಂಬುಲೆನ್ಸ್ ನಲ್ಲಿ ಕೌದಳ್ಳಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಕೊಳ್ಳೇಗಾಲದ ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದ್ದಾರೆ. ಅದರಂತೆ ಆ್ಯಂಬುಲೆನ್ಸ್ ನಲ್ಲಿ ಕೊಳ್ಳೇಗಾಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಹನೂರು ಪಟ್ಟಣದ ಹೊರವಲಯದ ಎಲ್ಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಾಲಯದ ಬಳಿ ಶಿಲ್ಪಾರಿಗೆ ಹೆರಿಗೆಯಾಗಿದೆ.
ತಾಯಿ-ಮಗುವಿಗೆ ಪ್ರಾಥಮಿಕ ಶುಶ್ರೂಷೆ ಮಾಡಿದ ಆ್ಯಂಬುಲೆನ್ಸ್ ಸಿಬ್ಬಂದಿ ರಾಣಿ ಸೇರಿದಂತೆ ನಾಗಾರಾಜು ಅವರು ಶಿಲ್ಪಾರನ್ನು ತಕ್ಷಣ ಕೊಳ್ಳೇಗಾಲ ಆಸ್ಪತ್ರೆಗೆ ತಲುಪಿಸಿದ್ದಾರೆ. ಆ್ಯಂಬುಲೆನ್ಸ್ ಸಿಬ್ಬಂದಿಯ ತುರ್ತು ಸ್ಪಂದನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.