×
Ad

ಚಾಮರಾಜನಗರ | ರೈಲಿಗೆ ಸಿಲುಕಿ ಯುವಕ ಮೃತ್ಯು

Update: 2026-02-21 18:01 IST

ಚಾಮರಾಜನಗರ: ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಪಣ್ಯದಹುಂಡಿ ಬಳಿ ನಡೆದಿದೆ.

ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ನಿವಾಸಿ ನಾಗೇಂದ್ರ(30) ಮೃತಪಟ್ಟವರು.

ನಾಗೇಂದ್ರ ಅವರು ವೃತ್ತಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ರೈಲ್ವೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಮೃತದೇಹವನ್ನು ಸಿಮ್ಸ್ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು. ಸಾವಿಗೆನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News