ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಹೊರವಲಯದ ಚಿನ್ನಸಂದ್ರ ಸಮೀಪದ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತನನ್ನು ರಾಯಚೂರು ಮೂಲದ ಸೋಮಶೇಖರ್ (20) ಎಂದು ಗುರುತಿಸಲಾಗಿದೆ. ಇವರು ಚಿಂತಾಮಣಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ವಿದ್ಯಾರ್ಥಿ ನಿಲಯದ ಬಟ್ಟೆ ತೊಳೆಯುವ ಕೊಠಡಿಯಲ್ಲಿ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶಾಬುದ್ದೀನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor