Chikkaballapur | ರೈತ ಸಂಘದ ಕಚೇರಿಯಲ್ಲೇ ರೈತ ಮುಖಂಡ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ರೈತರ ಪರ ಧ್ವನಿ ಎತ್ತುತ್ತಿದ್ದ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾಗಿದ್ದ ರಾಮಾಂಜಿನಪ್ಪ(75) ನಗರದ ವಾಪಸಂದ್ರದಲ್ಲಿರುವ ಹಾಲಿನ ಡೈರಿ ಮೇಲಿನ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ವರದಿಯಾಗಿದೆ.
ಮೃತರು ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ಜಮೀನು ಮಾರಾಟದ ಬಾಕಿ ಹಣ ಹಾಗೂ ಕೈ ಸಾಲದ ವಿಚಾರವನ್ನು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಇನ್ನೂ ಘಟನೆ ತಿಳಿಯುತ್ತಿದ್ದಂತೆ ಎಸ್ಪಿ ಹಾಗೂ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಕೋ ತಂಡವೂ ಸ್ಥಳಕ್ಕೆ ತೆರಳಿ ಸಾಕ್ಷ್ಯ ಸಂಗ್ರಹಿಸಿದೆ. ಇನ್ನು ಮೃತ ರಾಮಾಂಜಿನಪ್ಪ ಅವರ ಸಂಬಂಧಿಕರು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.