×
Ad

ಚಿಕ್ಕಬಳ್ಳಾಪುರ : ಅಪರಿಚಿತ ವಾಹನ ಢಿಕ್ಕಿ ಶಂಕೆ: ಇಬ್ಬರು ಕಾರ್ಮಿಕರು ಮೃತ್ಯು

Update: 2026-06-20 12:38 IST

ಚಿಕ್ಕಬಳ್ಳಾಪುರ, ಜೂನ್ 20: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನು ಕುಣಿಗಲ್ ಮೂಲದ ಜೀವನ್ (22) ಹಾಗೂ ಬಾದಿಗಾನಹಳ್ಳಿ ಮೂಲದ ವರುಣ್ (22) ಎಂದು ಗುರುತಿಸಲಾಗಿದೆ. ಇವರು ಚಿಕ್ಕಬಳ್ಳಾಪುರದ ಸೇಟ್ ದಿನ್ನೆ ಪ್ರದೇಶದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿಕೊಂಡು ತಡರಾತ್ರಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News