×
Ad

Chikkaballapura | ಕಾಂಗ್ರೆಸ್‌ ಮುಖಂಡನಿಂದ ಸರಕಾರಿ ಅಧಿಕಾರಿಗೆ ಧಮ್ಕಿ; ಆರೋಪ

Update: 2026-02-06 18:06 IST

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ ಹಾಕಿದ್ದಾರೆ ಎನ್ನುವ ಆರೋಪ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರದಲ್ಲೂ ಸರಕಾರಿ ಅಧಿಕಾರಿಗೆ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಶಾಸಕರಾದ ಪ್ರದೀಪ್ ಈಶ್ವರ್ ಅವರ ಬೆಂಬಲಿಗನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಶಾಸಕ ಪ್ರದೀಪ್ ಈಶ್ವರ್ ಅವರ ಆಪ್ತ ಬೆಂಬಲಿಗರ ವಲಯದಲ್ಲಿ ಗುರುತಿಸಿಕೊಂಡಿರುವ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಮುಖಂಡ ನಾಗೇಶ್ ರೆಡ್ಡಿ ಎಂಬವರು ಸರಕಾರಿ ಅಧಿಕಾರಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಗೆ ಬೆಂಬಲ ನೀಡುತ್ತಿದ್ದೀಯಾ ಎಂಬ ಆರೋಪದೊಂದಿಗೆ ಕೆಟ್ಟ ಪದಗಳನ್ನು ಬಳಸಿದ್ದಾರೆ ಎನ್ನುವ ಆಡಿಯೋ ಈಗ ವ್ಯಾಪಕವಾಗಿ ವೈರಲ್‌ ಆಗಿದೆ.

ವೈರಲ್ ಆಗಿರುವ ಆಡಿಯೋದಲ್ಲಿ ನಾಗೇಶ್ ರೆಡ್ಡಿ ಅವರು ಬಿಎಲ್ಓ ಅಧಿಕಾರಿಯಾಗಿರುವ ಹಾಗೂ ಶಿಕ್ಷಕರಾದ ಶಿವಶಂಕರ್ ಅವರೊಂದಿಗೆ ಮಾತನಾಡಿರುವುದು ದಾಖಲಾಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಕರ್ತವ್ಯ ನಿರ್ವಹಣೆಯ ವಿಚಾರದಲ್ಲಿ,ಬಿಜೆಪಿಗೆ ಬೆಂಬಲ ನೀಡುತ್ತಿದ್ದೀಯಾ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News