Chikkaballapura| ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್, ಎಎಸ್‌ಐ
ಚಿಕ್ಕಬಳ್ಳಾಪುರ : ಪ್ರಕರಣವೊಂದಕ್ಕೆ ಸಂಬಂಧಿಸಿ ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮತ್ತು ಓರ್ವ ಎಎಸ್‌ಐ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಶರಣಪ್ಪ ಹಾಗೂ ಸಹಾಯಕ ಸಬ್ ಇನ್‌ಸ್ಪೆಕ್ಟರ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು. ತಾಲೂಕಿನ ಮೊಟ್ಲೊರು ಗ್ರಾಮದ ರಾಘವೇಂದ್ರ ಎಂಬವರ ಪ್ರಕರಣ ಒಂದರ ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ರಾಘವೇಂದ್ರ ಅವರಿಂದ 1 ಲಕ್ಷ ರೂ.ಗ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ನಿಟ್ಟಿನಲ್ಲಿ 80 ಸಾವಿರ ರೂ. ಪಡೆಯುವಾಗ ಕನ್ನಡ ಭವನದಲ್ಲಿ ಬಳಿ ವೆಂಕಟೇಶಪ್ಪ ಮತ್ತು ನಗರ ಹೊರವಲಯದ ಚಿತ್ರಾವತಿ ಬಳಿ ಶರಣಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.ಲೋಕಾಯುಕ್ತ ಎಸ್‌ಪಿ ಆಂಟೋನಿ ಜಾನ್,ಡಿವೈಎಸ್‌ಪಿ ವಿಜಯೇಂದ್ರ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಈ ಇಬ್ಬರು ಪೊಲೀಸರನ್ನು ತನಿಖೆಗೆ ಒಳಪಡಿಸಿದ್ದಾರೆ.