ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ 14 ದಿನ ನ್ಯಾಯಾಂಗ ಬಂಧನ
ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದ ಉದ್ಯಮಿಗೆ ಷರತ್ತುಬದ್ದ ಜಾಮೀನು
Update: 2026-01-27 20:36 IST
ರಾಜೀವ್ ಗೌಡ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ನ್ಯಾಯಾಲಯಕ್ಕೆ ಮಂಗಳವಾರ ಪೊಲೀಸ್ ಇಲಾಖೆ ಹಾಜರುಪಡಿಸಿತು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ಹೊರಡಿಸಿದೆ. ಅಲ್ಲದೆ, ರಾಜೀವ್ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜೀವ್ ಗೌಡ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದ ಆರೋಪದಡಿ ಬಂಧಿತನಾಗಿದ್ದ ಉದ್ಯಮಿ ಮೈಕಲ್ ಜೋಸೆಫ್ ರೇಗೋ ಎಂಬವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.