×
Ad

ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಖಾಸಗಿ ಬಸ್; ಹಲವರಿಗೆ ಗಾಯ

Update: 2023-10-29 13:50 IST

ಮೂಡಿಗೆರೆ: ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಸಂಚರಿಸುತ್ತಿದ್ದ ಕಾವೇರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ  ಢಿಕ್ಕಿ ಹೊಡೆದಿರುವ ಘಟನೆ ಬಿಳಗುಳದಲ್ಲಿ ನಡೆದಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಮೂಡಿಗೆರೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ ಮತ್ತು ಪೊಲೀಸರು ಧಾವಿಸಿ ಸ್ಪಂದಿಸಿದ್ದಾರೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News