×
Ad

ಚಿಕ್ಕಮಗಳೂರು | ವಾಟ್ಸಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ 10.49 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Update: 2025-03-23 13:41 IST

ಸಾಂದರ್ಭಿಕ ಚಿತ್ರ | PC : freepik.com

ಚಿಕ್ಕಮಗಳೂರು: ವಾಟ್ಸಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದ್ದು ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.20ರಂದು ನಗರದ ವ್ಯಕ್ತಿಯೊಬ್ಬರಿಗೆ ವಾಟ್ಸಪ್‌ ಗ್ರೂಪ್ ನಲ್ಲಿ ಪಿ.ಎಂ.ಕಿಸಾನ್ ಯೋಜನಾ ಎಪಿಕೆ ಎಂಬ ಹೆಸರಿನಲ್ಲಿ ಪೋಸ್ಟ್ ಲಿಂಕ್ ಬಂದಿದ್ದು, ಲಿಂಕ್ ಡೌನ್ ಲೋಡ್ ಮಾಡಿದ ಕೂಡಲೇ ವ್ಯಕ್ತಿಯ ಗಮನಕ್ಕೆ ಬರುವಷ್ಟರಲ್ಲಿ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 10.49ಲಕ್ಷ ರೂ. ಕಡಿತಗೊಂಡಿದೆ. ಮಾ.22ರಂದು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸೈಬರ್ ವಂಚನೆ ಪ್ರಕರಣದಲ್ಲಿ ಎಪಿಕೆ( ಆಂಡ್ರಾಯ್ಡ್ ಪ್ಯಾಕೇಜ್ ) ಫೈಲ್ ವಂಚನೆಗಳು ಆಂಡ್ರಾಯ್ಡ್ ಮೊಬೈಲ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಮೋಸ ಮಾಡಲಾಗುತ್ತಿದೆ. ವಾಟ್ಸಪ್, ಫೇಸ್ ಬುಕ್ ಮೆಸೆಂಜರ್, ಟೆಲಿಗ್ರಾಂ ಸೇರಿ ಸಾಮಾಜಿಕ ಜಾಲತಾಣದಲ್ಲಿ ಬರುವ ಈ ರೀತಿಯ ಎಪಿಕೆ ಫೈಲ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳದಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News