ಭಾರೀ ಮಳೆ | ಚಿಕ್ಕಮಗಳೂರಿನ 6 ತಾಲೂಕುಗಳ ಅಂಗನವಾಡಿ-ಶಾಲೆಗಳಿಗೆ ನಾಳೆ (ಜೂ.16) ರಜೆ ಘೋಷಣೆ
Update: 2025-06-15 20:50 IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ (ಜೂ.16) ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ.