×
Ad

ಚಿಕ್ಕಮಗಳೂರು | ಮರಕ್ಕೆ ಬೈಕ್ ಢಿಕ್ಕಿ; ಇಬ್ಬರು ಸವಾರರು ಮೃತ್ಯು

Update: 2025-02-11 19:50 IST

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು : ಮರಕ್ಕೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ಮಂಗಳವಾರ ವರದಿಯಾಗಿದೆ.

ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದ ನಿವಾಸಿಗಳಾದ ಪ್ರತಾಪ್ (28), ಗೋವಿಂದ (30) ಮೃತರು. ಅಜ್ಜಂಪುರದ ಐತಿಹಾಸಿಕ ಅಂತರಘಟ್ಟೆ ಜಾತ್ರೆಗೆ ಹೋಗುತ್ತಿದ್ದ ವೇಳೆ ಸವಾರನ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News