×
Ad

ಆಲ್ದೂರು | ಕಾಡಾನೆ ದಾಳಿ: ತೋಟದ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಮೃತ್ಯು

Update: 2023-11-08 09:26 IST

ಚಿಕ್ಕಮಗಳೂರು, ನ.8: ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ವೀಣಾ (45) ಎಂದು ಗುರುತಿಸಲಾಗಿದೆ.

ಕಾರ್ಮಿಕ ಮಹಿಳೆಯಾಗಿದ್ದ ವೀಣಾ ಇಂದು ಬೆಳಗ್ಗೆ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೀಣಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆಲ್ದೂರು ವಲಯದ ಅರಣ್ಯದಲ್ಲಿ ಕೆಲ ದಿನಗಳಿಂದ ಏಳು ಕಾಡಾನೆಗಳ ಹಿಂಡು ಬೀಡು ಬಿಟ್ಟಿದೆ. ಅವುಗಳನ್ನು ಹಿಮ್ಮೆಟಿಸುವಂತೆ ಆಗ್ರಹಿಸಿರುವ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸ್ಥಳಕ್ಕೆ ಆಲ್ದೂರು ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲಾದ್ಯಂತ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ದುರ್ಘಟನೆ ಇದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News