SHIVAMOGGA | ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಕಳೇಬರ ಪತ್ತೆ
ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ಹುಲಿಯ ಕಳೇಬ ಪತ್ತೆಯಾಗಿದೆ.
ಜ.6ರಂದು ಬೆಳಗ್ಗೆ ಹುಲಿ ಗಣತಿಗೆ ತೆರಳಿದ್ದ ಸಿಬ್ಬಂದಿ ಹುಲಿಯ ಕಳೇಬರವನ್ನು ಕಂಡಿದ್ದಾರೆ. ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪುಲ್ಕಿತ್ ಮೀನ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸತ್ತಿರುವುದು 8ರಿಂದ 10 ವರ್ಷ ಪ್ರಾಯದ ಗಂಡು ಹುಲಿ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಮಯಾನುಸಾರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.8 ರಿಂದ 10 ವರ್ಷದ ಗಂಡು ಹುಲಿಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಅಧಿಕಾರಿಗಳೂ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಹುಲಿಯ ಮುಂಗಾಲಿಗೆ, ಕುತ್ತಿಗೆ ಭಾಗದಲ್ಲಿ ಇನ್ನೊಂದು ಹುಲಿ ಹೊಡೆದಿರುವ ಉಗುರಿನ ಗುರುತುಗಳು ಪತ್ತೆಯಾಗಿವೆ. ಎರಡು ಬಲಿಷ್ಠ ಹುಲಿಗಳು ಕಾದಾಟದಲ್ಲಿ ಈ ಹುಲಿ ಸತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಪಶುವೈದ್ಯಾಧಿಕಾರಿ ಸಚಿನ್ ನಾಯಕ್ ಮತ್ತು ಶಿವಕುಮಾರ್ ತಂಡ ಮರಣೋತ್ತರ ಪರೀಕ್ಷೆ ನಡೆಸಿದೆ.
ಸ್ಥಳದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ, ವಲಯ ಅರಣ್ಯಾಧಿಕಾರಿ ಗೌರವ, ಹುಲಿ ಸಂರಕ್ಷಣ ಪ್ರಾಧಿಕಾರದ ಪ್ರತಿನಿಧಿ ವೀರೇಶ್ ಜಿ., ವೈಲ್ಡ್ ಕೇರ್ ಸಂಸ್ಥೆಯ ಅಧ್ಯಕ್ಷ ಮಧು ಮೂಗುತಿಹಳ್ಳಿ, ಒನ್ ಅರ್ಥ್ ಸಂಸ್ಥೆಯ ಮುಖಂಡ ಭರತ್ ಸಿ.ವಿ., ಸ್ಥಳೀಯ ಪ್ರತಿನಿಧಿಗಳು ಗ್ರಾಮಸ್ಥರು ಮರಣೋತ್ತರ ಪಂಚನಾಮೆ ಪ್ರಕ್ರಿಯೆಯಲ್ಲಿ ಸಹಕರಿಸಿದರು.
ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಹುಲಿಯ ಕಳೇಬರವನ್ನು ಸುಡಲಾಯಿತು.