×
Ad

ರಾಜ್ಯ ಸರಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಯುವಜನತೆಗೆ ಅನ್ಯಾಯ ಮಾಡಿದೆ : ಬಿ.ವೈ.ವಿಜಯೇಂದ್ರ

Update: 2026-03-01 18:10 IST

ಬಿ.ವೈ.ವಿಜಯೇಂದ್ರ

ಚಿಕ್ಕಮಗಳೂರು : ಸಿದ್ದರಾಮಯ್ಯ ಸರಕಾರ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಈಗ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಅಹಿಂದ ಸಮುದಾಯಕ್ಕೂ ದ್ರೋಹ ಎಸಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ರವಿವಾರ ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯುವ ಸಮುದಾಯದ ಆಕ್ರೋಶಕ್ಕೆ ರಾಜ್ಯ ಸರಕಾರ ಬೆಲೆ ತೆರಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು 2.80ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಯುವಜನತೆ ಧಾರವಾಡದಲ್ಲಿ ಪ್ರತಿಭಟನೆ ಮಾಡಿದ್ದು, ಈ ವೇಳೆ ರಾಜ್ಯ ಸರಕಾರ ಯುವಜನರ ಮೇಲೆ ಲಾಠಿ ಪ್ರಹಾರ ನಡೆಸುವ ಮೂಲಕ ಸರಕಾರ ಹೋರಾಟದ ಹಕ್ಕಿನ ಧಮನ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರಕಾರದ ಆಡಳಿತದಿಂದಾಗಿ ರೈತರು ಹತಾಶರಾಗಿದ್ದಾರೆ, ಯುವಜನತೆ ಸರಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಸರಕಾರ ಯುವಜನತೆ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸದೇ ನಿರ್ಲಕ್ಷಿಸಿದರೇ ಅವರು ರಾಜ್ಯಾದ್ಯಂತ ದಂಗೆ ಏಳುವುದು ಖಚಿತ ಎಂದು ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News