ಚಾರ್ಮಾಡಿ ಘಾಟಿಯಲ್ಲಿ ಎರಡು ಲಾರಿಗಳು ಪಲ್ಟಿ: ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಟ್ರಾಫಿಕ್ ಜಾಮ್
ವಾಹನ ಸವಾರರ ಪರದಾಟ
Update: 2026-01-23 23:25 IST
ಚಿಕ್ಕಮಗಳೂರು: ಚಿಕ್ಕಮಗಳೂರು–ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಜೆ ಎರಡು ಲಾರಿಗಳು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ.
ಹತ್ತು ಕಿಲೋಮೀಟರ್‌ಗಿಂತ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ತಿಳಿದು ಬಂದಿದೆ.
ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೊಟ್ಟಿಗೆಹಾರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಲಾರಿ ತೆರವು ಕಾರ್ಯ ಮುಂದುವರೆದಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.