×
Ad

Chikkamagaluru | ಚಲಿಸುತ್ತಿದ್ದ ಬಸ್‍ನಲ್ಲಿ ಕಾಣಿಸಿಕೊಂಡ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು

Update: 2026-03-03 19:51 IST

ಚಿಕ್ಕಮಗಳೂರು : ನಗರದಿಂದ ಬೇಲೂರು ಮಾರ್ಗವಾಗಿ ಚಲಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ (ಕೆಎಸ್ಸಾರ್ಟಿಸಿ) ಬಸ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ನಿರ್ವಹಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕೆಎಸ್ಸಾರ್ಟಿಸಿ ಬಸ್ ನಗರದ ಬಸ್ ನಿಲ್ದಾಣದಿಂದ ಬೇಲೂರು ಮಾರ್ಗವಾಗಿ ಚಲಿಸುತ್ತಿದ್ದ ವೇಳೆ ನಗರದ ಜೂನಿಯರ್ ಕಾಲೇಜು ಸಮೀಪ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ನಿವಾರ್ಹಕ ಬಸ್‍ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಬಸ್ಸಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಬಸ್‍ನಲ್ಲಿ ಸಾಕಷ್ಟು ಪ್ರಯಾಣಿಕರಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‍ನಿಂದ ಡಿಸೇಲ್ ಸೋರಿಕೆಯಾಗಿದ್ದರಿಂದ ಬಸ್‍ಗೆ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News