×
Ad

ಚಿಕ್ಕಮಗಳೂರು | ಆಸ್ತಿಗಾಗಿ ಸಹೋದರಿಯರಿಂದಲೇ ಸಹೋದರನ ಹತ್ಯೆ!

Update: 2024-08-22 13:44 IST

ಚಿಕ್ಕಮಗಳೂರು : ಆಸ್ತಿಗಾಗಿ ಮೂವರು ಸಹೋದರಿಯರು ಸಹೋದರನನ್ನೇ ಹತ್ಯೆ ಮಾಡಿದ ಘಟನೆ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಗುರುವಾರ (ಆ.22) ವರದಿಯಾಗಿದೆ.

ಹತ್ಯೆಯಾದ ವ್ಯಕ್ತಿಯನ್ನು ರಾಘವೇಂದ್ರ (43) ಎಂದು ಗುರುತಿಸಲಾಗಿದೆ. ಬಾವನ ಜೊತೆಗೂಡಿ ಮೂವರು ಸಹೋದರಿಯರು ಬೆಳ್ಳಂಬೆಳಗ್ಗೆಯೇ ಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಬಾವನ ಜೊತೆಗೂಡಿ ಮೂವರು ಸಹೋದರಿಯರು ತಮ್ಮನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News