×
Ad

Chikkamagaluru | ದೇವಾಲಯಕ್ಕೆ ಪರಿಶಿಷ್ಟರ ಪ್ರವೇಶ ನಿರ್ಬಂಧ ಸಮಸ್ಯೆ ಇತ್ಯರ್ಥ

Update: 2026-02-20 23:51 IST

ಚಿಕ್ಕಮಗಳೂರು : ತಾಲೂಕಿನ ಹೊಸಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಗ್ರಾಮಸ್ಥರು ಪರಿಶಿಷ್ಟರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿ ಪರಿಶಿಷ್ಟರು ದೇವಸ್ಥಾನ ಪ್ರವೇಶಕ್ಕೆ ಅನುವು ಮಾಡಿಕೊಟ್ಟರು.

ಗ್ರಾಮದಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಪ್ರವೇಶಿಸುವಂತಿಲ್ಲವೆಂದು ಗ್ರಾಮಸ್ಥರು ನಿರ್ಬಂಧವನ್ನು ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಪರಿಶಿಷ್ಟ ಸಮುದಾಯದವರು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರು. ಸಮಸ್ಯೆಯನ್ನು ಅರಿತ ಜಿಲ್ಲಾಡಳಿತ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News