×
Ad

ಚಿಕ್ಕಮಗಳೂರು ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

Update: 2026-07-02 17:12 IST

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಬಾಂಬ್ ಬೆದರಿಕೆ ಬಂದಿದ್ದು, ಇದು ನ್ಯಾಯಾಲಯ ಆವರಣದಲ್ಲಿ ಕೆಲಹೊತ್ತು ಆತಂಕದ ವಾತವರಣಕ್ಕೆ ಕಾರಣವಾಗಿತ್ತು.

ಗುರುವಾರ ಬೆಳಿಗ್ಗೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅಪರಿಚಿತರಿಂದ, ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯ ಇಮೇಲ್ ಸಂದೇಶ ಬಂದಿದೆ.

ಈ ಹಿನ್ನೆಲೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದ ಸಿಬ್ಬಂದಿ ಆಗಮಿಸಿ ನ್ಯಾಯಾಲಯದ ಕೊಠಡಿಗಳು, ರೆಕಾರ್ಡ್ ರೂಮ್, ಕಚೇರಿ, ವಾಹನ ಪಾರ್ಕಿಂಗ್ ಪ್ರದೇಶ, ಗಾರ್ಡನ್ ಸೇರಿದಂತೆ ನ್ಯಾಯಾಲಯದ ಆವರಣದ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದರು.

ಬಾಂಬ್ ಬೆದರಿಕೆ ನಡುವೆ ಮುಂದುವರಿದ ನ್ಯಾಯಾಲಯದ ಕಲಾಪ: ಬಾಂಬ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ನಂತರವೂ ಕಕ್ಷಿದಾರರು ಮತ್ತು ನ್ಯಾಯಾವಾದಿಗಳಿಗೆ ಯಾವುದೇ ತೊಂದರೆಯಾಗದಂತೆ ನ್ಯಾಯಾಲಯ ಕಲಾಪವನ್ನು ಎಂದಿನಂತೆ ನಡೆಸಲಾಯಿತು. ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದರೇ, ಮತ್ತೊಂದು ಕಡೆ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು, ಶ್ವಾನದಳದ ಸಿಬ್ಬಂದಿಗಳು ಪೊಲೀಸ್ ಸಿಬ್ಬಂದಿ ನೆರವಿನೊಂದಿಗೆ ತಪಾಸಣೆ ನಡೆಸಿದರು. ನ್ಯಾಯವಾದಿಗಳು ಮತ್ತು ಕಕ್ಷಿದಾರರು ಎಂದಿನಂತೆ ಕಲಾಪದಲ್ಲಿ ಪಾಲ್ಗೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News