ಸಾಂದರ್ಭಿಕ ಚಿತ್ರ | PC : Gemini AI

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ  ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಮೃತ ಮಕ್ಕಳೆಲ್ಲ ಒಂದೇ ಊರಿನವರಾಗಿದ್ದು, ಎಲ್ಲಾ 12 ವರ್ಷದವರಾಗಿದ್ದಾರೆ. ಇವರೆಲ್ಲ ಬೇರೆ ಬೇರೆ ಶಾಲೆಗಳಲ್ಲಿ 6ನೇ ತರಗತಿ ಓದುತ್ತಿದ್ದರು. ಶಾಲೆಗಳಿಗೆ ದಸರಾ ರಜೆ ಇರುವುದರಿಂದ ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ.

ಕೆರೆ ಬಳಿ ಬಟ್ಟೆ ಹಾಗೂ ಪಾತ್ರೆ ತೊಳೆಯಲು ನಿರ್ಮಿಸಿರುವ ಕಟ್ಟೆಗಳ ಬಳಿ ಮಕ್ಕಳು ಈಜುವಾಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಮಕ್ಕಳ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor