×
Ad

ಚಿಕ್ಕಮಗಳೂರು | ಕುಡಿದ ಮತ್ತಿನಲ್ಲಿ ಗಲಾಟೆ : ಯುವಕನಿಗೆ ಚಾಕು ಇರಿತ

Update: 2025-12-29 15:38 IST

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಬಾರ್‌ನೊಳಗೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ.

ಗಾಯಗೊಂಡ ಮೂಗುತಿ ಹಳ್ಳಿ ಗ್ರಾಮದ ಯುವಕ ಅನಿಲ್ ಕುಮಾರ್ ರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಗರೇಟ್ ವಿಚಾರವಾಗಿ ಎರಡು ತಂಡಗಳ ನಡುವೆ ಆರಂಭವಾದ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಗಲಾಟೆ ವೇಳೆ ಏಕಾಏಕಿ ಯುವಕನೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಕು ಇರಿತ ನಡೆಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾರ್‌ನಲ್ಲಿ ನಡೆದ ಗಲಾಟೆ ಹಾಗೂ ಚಾಕು ಇರಿತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. 

ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News