×
Ad

ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Update: 2023-09-03 14:55 IST

ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಲ್ದೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಅರೆನೂರು ಗ್ರಾಮದ ಕಂಚುಕಲ್ ನ ಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡು ಭಾಗದಲ್ಲಿ ನಿರಂತರವಾಗಿ ಕಾಡಾನೆ ದಾಳಿ ನಡೆಯುತ್ತಿದ್ದು, ಮೂಡಿಗೆರೆಯಲ್ಲಿ 2 ವರ್ಷದಲ್ಲಿ 6ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News