×
Ad

ಚಿಕ್ಕಮಗಳೂರು | ಮೇಲಾಧಿಕಾರಿಗಳ ಕಿರುಕುಳ ಆರೋಪ : ಸರ್ಕಾರಿ ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ

Update: 2025-04-19 13:13 IST

ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಬಸ್‌ ಚಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ.

ಚಂದ್ರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಸಾರ್ಟಿಸಿ ಚಾಲಕ ಎಂದು ಗುರುತಿಸಲಾಗಿದೆ.

ಚಾಲಕನು ರಜೆ ವಿಚಾರವಾಗಿ ಮೇಲಾಧಿಕಾರಿ ಪುಟ್ಟಸ್ವಾಮಿ ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಕಡೂರು ಡಿಪೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ ಚಾಲಕನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಲಕ ಬರೆದಿಟ್ಟ ಡೆತ್ ನೋಟಲ್ಲಿ 'ಹುಷಾರಿಲ್ಲದೆ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ, ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ, ಆದರೂ ಗೈರು ಹಾಕಿದ್ದಾರೆ, ಹಣ ಕೊಟ್ಟರೆ ಎಷ್ಟು ದಿನ ಬೇಕಾದ್ರು ರಜೆ ನೀಡುತ್ತಾರೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರು ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾನೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News