Chikkamagaluru | ವಸತಿ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ : ಆಸ್ಪತ್ರೆಗೆ ದಾಖಲು
Update: 2026-08-14 12:36 IST
ಸಾಂದರ್ಭಿಕ ಚಿತ್ರ | Photo credit : AI
ಚಿಕ್ಕಮಗಳೂರು: ನಗರದ ಕಲ್ಯಾಣನಗರದಲ್ಲಿರುವ ವಸತಿ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ವಿದ್ಯಾರ್ಥಿ ತಾನು ಮಲಗಿದ್ದ ಕೋಣೆಯಲ್ಲಿ ಬಟ್ಟೆ ಒಣಗಿಸಲು ಕಟ್ಟಿದ್ದ ಹಗ್ಗದಿಂದ ನೇಣು ಹಾಕಿಕೊಂಡಿದ್ದಾನೆ. ಇದನ್ನು ಗಮನಿಸಿದ ಸಹಪಾಠಿಗಳು ಕೂಡಲೇ ಆತನನ್ನು ರಕ್ಷಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ತಕ್ಷಣ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೆಂಟಿಲೇಟರ್ ಅಳವಡಿಸಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.