×
Ad

ಚಿಕ್ಕಮಗಳೂರು: ದ್ವಿಚಕ್ರ ವಾಹನಕ್ಕೆ ಕಾಮಿಡಿ ಸ್ಟಾರ್ ಚಂದ್ರಪ್ರಭಾ ಕಾರು ಢಿಕ್ಕಿ

Update: 2023-09-06 10:48 IST

ಚಿಕ್ಕಮಗಳೂರು, ಸೆ.6: ಕಿರುತೆರೆ ಕಾಮಿಡಿ ನಟನಿಗೆ ಸೇರಿದ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾಮಿಡಿ ಕಿಲಾಡಿ ಚಂದ್ರಪ್ರಭಾ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಮಾಲ್ತೇಶ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಚಿಕ್ಕಮಗಳೂರು ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News