ಚಿಕ್ಕಮಗಳೂರು: ಭಾರೀ ಮಳೆ; ಐದು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 8) ರಜೆ
Update: 2026-07-08 07:16 IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು ಈ ಹಿನ್ನಲೆಯಲ್ಲಿ ಐದು ತಾಲೂಕಿನ ಅಂಗನ ವಾಡಿ, ಶಿಶುವಿಹಾರ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲೂಕಿನ ಎಲ್ಲಾ ಹೋಬಳಿ ಗಳ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಅಂಗನವಾಡಿ, ಶಿಶುಪಾಲನಾ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಜಾಗರ, ಖಾಂಡ್ಯ, ಆಲ್ದೂರು, ಆವತಿ ಮತ್ತು ವಸ್ತಾರೆ ಹೋಬಳಿಗಳ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳಿಗೆ ಜು.8 ರ ಬುಧವಾರ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.