ಚಿಕ್ಕಮಗಳೂರು: ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ
Update: 2025-11-04 14:52 IST
ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಗರದಲ್ಲಿ ವರದಿಯಾಗಿದೆ.
ಮೆಸ್ಕಾಂ ಕಿರಿಯ ಅಭಿಯಂತರ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆ ಬಿದ್ದ ಅಧಿಕಾರಿಯಾಗಿದ್ದಾರೆ. ಈ ಅಧಿಕಾರಿ ಮೆಸ್ಕಾಂ ಗುತ್ತಿಗೆದಾರನ ಬಿಲ್ ಪಾಸ್ ಮಾಡಲು 40ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದ್ದು, ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಚಾರದ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಮಂಗಳವಾರ ನಗರದ ಮೆಸ್ಕಾಂ ಇಲಾಖೆಯ ಕಚೇರಿಯಲ್ಲಿ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣದ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.