Chikkamagaluru | 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ
Update: 2026-02-25 13:46 IST
ನಂಜುಂಡಮ್ಮ
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಿಡಿದಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.