ಚಿಕ್ಕಮಗಳೂರು: ಪಿಕಪ್, ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಇಬ್ಬರಿಗೆ ಗಾಯ
Update: 2025-06-28 09:45 IST
ಚಿಕ್ಕಮಗಳೂರು: ಪಿಕಪ್ ಹಾಗೂ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಪಿಕಪ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪ ನಡೆದಿದೆ.
ಗಾಯಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.