×
Ad

ಚಿಕ್ಕಮಗಳೂರು |ಬಾಲಕಿ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ

Update: 2025-08-23 18:59 IST

ಸಾಂದರ್ಭಿಕ ಚಿತ್ರ | PC : freepik

ಚಿಕ್ಕಮಗಳೂರು, ಆ.23 : ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

2023ರಲ್ಲಿ ಕಡೂರು ತಾಲೂಕಿನ ಬಾಲಕಿಯೋರ್ವಳನ್ನು ಬೆದರಿಸಿ ಲಾಡ್ಜ್‌ಗೆ ಕರೆದೊಯ್ದಿದ್ದ ತಾಲೂಕಿನ ಚಿಕ್ಕಂಗಳ ಗ್ರಾಮದ ಕಿರಣ್ ನಾಯಕ್(21) ಹಾಗೂ ಅಭಿಷೇಕ್ ನಾಯಕ್(22) ಎಂಬವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಸಂಬಂಧ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಳು. ಬಾಲಕಿಯ ಹೇಳಿಕೆ ಮೇರೆಗೆ ಕಡೂರು ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಎಸಗಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದರು.

ಘಟನೆ ಸಂಬಂಧ ಪೊಲೀಸರು ಚಿಕ್ಕಮಗಳೂರು ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ಕಿರಣ್ 40 ಸಾವಿರ, ಅಭಿಷೇಕ್ 11 ಸಾವಿರ ದಂಡ ಪಾವತಿಸಲು ತೀರ್ಪು ನೀಡಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರಕಾರಿ ಅಭಿಯೋಜಕ ಭರತ್ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News