×
Ad

ಚಿಕ್ಕಮಗಳೂರು: ಆರು ಮಂದಿ ನಕ್ಸಲರು ಸಮಾಜದ ಮುಖ್ಯವಾಹಿನಿಗೆ‌; ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್

Update: 2025-01-08 10:53 IST

ಚಿಕ್ಕಮಗಳೂರು: ಆರು ಮಂದಿ ನಕ್ಸಲರು ಜಿಲ್ಲಾಡಳಿತದ ಮುಂದೆ ಸಮಾಜದ ಮುಖ್ಯವಾಹಿನಿಗೆ‌ ಆಗಮಿಸುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.

ಮುಖ್ಯವಾಹಿನಿಗೆ ಆಗಮಿಸುವ ಆರು ಜನ ನಕ್ಸಲರ ಕುಟುಂಬಸ್ಥರು ತಮ್ಮ ಕುಟುಂಬದ ಸದಸ್ಯರನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಕಮಿಟಿ ಸದಸ್ಯರಾದ ಬಿ.ಟಿ.ಲಲಿತ ನಾಯಕ್ ಸೇರಿದಂತೆ ಅನೇಕರು ಸ್ಥಳದಲ್ಲಿ ಇದ್ದಾರೆ.

ಜಿಲ್ಲಾಡಳಿತ ಕಚೇರಿಯ ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಬಿಗಿ ಬಂದೋಬಸ್ತ್ ಗಾಗಿ ಪೊಲೀಸರ ನಿಯೋಜನೆಯಾಗಿದ್ದು ಆರು ಜನ ನಕ್ಸಲರು ಮೊದಲು ಪ್ರವಾಸಿ ಮಂದಿರಕ್ಕೆ ಆಗಮಿಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಅವರ ಮುಂದೆ ಸಮಾಜದ ಮುಖ್ಯವಾಹಿನಿಗೆ  ಸೇರಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News