×
Ad

ಚಿಕ್ಕಮಗಳೂರು| ಕಾರು ಪಲ್ಟಿಯಾಗಿ ವಿದ್ಯಾರ್ಥಿ ಮೃತ್ಯು, ಆರು ಮಂದಿ ಗಂಭೀರ

Update: 2025-12-25 00:31 IST

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗದ್ದೆಗೆ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಹೊರವಲಯದ ಮೂಗ್ತಿಹಳ್ಳಿ ಬಳಿ ನಡೆದಿರುವುದಾಗಿ ವರದಿಯಾಗಿದೆ.

ಚಿಕ್ಕಮಗಳೂರಿನ ಎಂಇಎಸ್ ಕಾಲೇಜು ವಿದ್ಯಾರ್ಥಿ ಮೋಹಿನ್ (19) ಮೃತಪಟ್ಟವರು. ಕೊಟ್ಟಿಗೆಹಾರದಿಂದ ಚಿಕ್ಕಮಗಳೂರಿಗೆ ಆಗಮಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗದ್ದೆಗೆ ಪಲ್ಟಿಯಾದ ಪರಿಣಾಮ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿನ ಯುವಕರ ತಂಡ ಕೊಟ್ಟಿಗೆಹಾರದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗಾಗಿ ತೆರಳಿದ್ದರು. ಕ್ರಿಕೆಟ್ ಪಂದ್ಯ ಮುಗಿಸಿಕೊಂಡು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆರು ಜನರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News