×
Ad

ಚಿಕ್ಕಮಗಳೂರು: ನದಿಗೆ ಬಿದ್ದು ಮಹಿಳೆ ಮೃತ್ಯು

Update: 2024-07-23 11:16 IST

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಕಳಸ ಪಟ್ಟಣ ಸಮೀಪದ ಗೇರು ತೋಟ ಎಂಬಲ್ಲಿ‌ ಮಂಗಳವಾರ ಬೆಳಕಿಗೆ ಬಂದಿದೆ.

ಗೇರು ತೋಟ ನಿವಾಸಿ ಶಾರದಾ(55) ಮೃತ ಮಹಿಳೆ. ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುವಾಗ ನದಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.

 ಜು.16ರಂದು ಎನ್.ಆರ್.ಪುರದ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದ ಶಾರದಾ ಅವರು ಮತ್ತೆ ಮನೆಗೆ ಹಿಂದಿರುಗಿರಲಿಲ್ಲ. ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಬೆಳಿಗ್ಗೆ ಗೇರುತೋಟ ಸಮೀಪದಲ್ಲಿ ಹರಿಯುವ ಭದ್ರಾ ನದಿಯಲ್ಲಿ ಮಹಿಳೆಯ ಶವವನ್ನು ಸ್ಥಳೀಯರು ಕಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯ ಪೊಲೀಸರು ಧರ್ಮಸ್ಥಳ ವಿಪತ್ತು ನಿರ್ವಹಣ ತಂಡದವರ ನೆರವಿನಿಂದ ನದಿಯಲ್ಲಿದ್ದ ಶವವನ್ನು ಹೊರ ತೆಗೆದಿದ್ದಾರೆ. ಆಸ್ಪತ್ರೆಗೆ ಹೋಗಿ ಹಿಂದಿರುಗುವಾಗ ಮಹಿಳೆ ಕಾಲು‌ಜಾರಿ ನದಿಗೆ ಬಿದ್ದು ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News