×
Ad

Chikkamagaluru | ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು

Update: 2026-03-22 19:07 IST

ಪ್ರವೀಣ್(25)

ಚಿಕ್ಕಮಗಳೂರು : ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ರವಿವಾರ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ವರದಿಯಾಗಿದೆ.

ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮದ ನಿವಾಸಿ ಪ್ರವೀಣ್(25) ಮೃತ ಯುವಕನಾಗಿದ್ದು, ಈತ ರವಿವಾರ ಮಧ್ಯಾಹ್ನದ ವೇಳೆ ತಮ್ಮ ಮನೆಯ ಬಳಿ ಇರುವ ಅಡಿಕೆ ತೋಟಕ್ಕೆ ನೀರು ಹಾಯಿಸಲು ಬೋರ್‌ ವೆಲ್ ಬಳಿ ತೆರಳಿದ್ದಾನೆ. ಬೋರ್‌ ವೆಲ್ ನ ಸ್ವಚ್ ಆನ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದೆ. ಘಟನೆಯಿಂದಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

ನೀರು ಹಾಯಿಸಲು ಹೋಗಿದ್ದ ಮಗ ಗಂಟೆ ಕಳೆದರೂ ಹಿಂದಿರುಗದನ್ನು ಗಮನಿಸಿದ ಕುಟುಂಬಸ್ಥರು ತೋಟದ ಬಳಿ ಹುಡುಕಾಡಿದ್ದಾರೆ. ಈ ವೇಳೆ ಪ್ರವೀಣ್ ಬೋರ್‌ವೆಲ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ಸಂಬಂದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News