×
Ad

CHIKKAMAGALURU | ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಯುವಕನ ಕೊಲೆ

Update: 2026-01-01 13:19 IST

ಮಂಜುನಾಥ್

ಚಿಕ್ಕಮಗಳೂರು: ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ. ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.

ವೇಣುವಿನ ಜೊತೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಗೆ ಮಂಜುನಾಥ್ ಹುಟ್ಟುಹಬ್ಬದ ಶುಭಾಶಯ ಕೋರಿ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಮಾಡಿದ್ದನೆನ್ನಲಾಗಿದೆ. ಈ ವಿಚಾರವಾಗಿ ವೇಣು ಮತ್ತು ಮಂಜುನಾಥ್ ಮಧ್ಯೆ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿದ್ದು, ವೇಣು ಹಾಗೂ ಸ್ನೇಹಿತರು ಮಂಜುನಾಥ್ ರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ತರೀಕೆರೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News