×
Ad

ಚಿಕ್ಕಮಗಳೂರು: ಎರಡು ಕಾರುಗಳ ಮಧ್ಯೆ ಅಪಘಾತ; ಪ್ರಯಾಣಿಕರಿಗೆ ಗಾಯ

Update: 2023-08-07 12:56 IST

ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿರುವ ಘಟನೆ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಾರುಗಳು ಪರಸ್ಪರ ಢಿಕ್ಕಿಯಾದ ರಭಸಕ್ಕೆ ಪಲ್ಟಿಯಾಗಿದ್ದು, ಎರಡೂ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿವೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸ್ಥಳೀಯ ಸಿ.ಸಿ.ಟಿ.ವಿಯೊಂದರಲ್ಲಿ ಸೆರೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News