×
Ad

ಚಿಕ್ಕಮಗಳೂರು | ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಆಘಾತ : ಬಾಲಕ ಮೃತ್ಯು

Update: 2024-06-15 13:39 IST

ಚಿಕ್ಕಮಗಳೂರು : ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಆಘಾತದಿಂದ 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಬಾಲಕನೊಬ್ಬ ಸಾವಪ್ಪಿರುವ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ಬಾಲಕನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ನೇರಳೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕನಿಗೆ  ಶಾಕ್ ಹೊಡೆದಿದ್ದು ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ‌. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News