×
Ad

ಚಿಕ್ಕಮಗಳೂರು | ಕುಟುಂಬದ ಮೂವರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಆರೋಪಿ

Update: 2025-04-02 00:16 IST

ಚಿಕ್ಕಮಗಳೂರು : ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತು ನಾದಿನಿ ಸಿಂಧೂ(24)  ಮೇಲೆ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಘಟನೆಯಲ್ಲಿ ನಾದಿನಿಯ ಗಂಡನ ಕಾಲಿಗೆ ಗುಂಡೇಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹತ್ಯೆ ಕೃತ್ಯದ ಬಳಿಕ ರತ್ನಾಕರ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೂ ಮುನ್ನ ರತ್ನಾಕರ ಸೆಲ್ಫಿ ವಿಡಿಯೋ ಮಾಡಿದ್ದು, ‘ಕುಟುಂಬದವರು ನನಗೆ ಮೋಸ ಮಾಡಿದ್ದಾರೆ. ಎರಡು ವರ್ಷದಿಂದ ಪತ್ನಿ ನನ್ನನ್ನು ಬಿಟ್ಟು ಹೋಗಿದ್ದಾಳೆ’ ಎಂದು ಹೇಳಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News