×
Ad

ಚಿಕ್ಕಮಗಳೂರು | ಕಳಸದಲ್ಲಿ ಗಾಳಿಮಳೆ: ಮರ ಬಿದ್ದು ಮನೆಗೆ ಹಾನಿ

Update: 2024-05-24 11:46 IST

ಚಿಕ್ಕಮಗಳೂರು, ಮೇ 24: ಕಳಸ ತಾಲೂಕಿನಲ್ಲಿ ಗಾಳಿ-ಮಳೆಯ ಅಬ್ಬರ ಜೋರಾಗಿದ್ದು, ಬೃಹತ್ ಗಾತ್ರದ ಮರ ಬಿದ್ದು, ಮನೆಯೊಂದು ಸಂಪೂರ್ಣ ಜಖಂಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಇಂದು ಬೆಳಗ್ಗೆ ನಾಲ್ಕು ಗಂಟೆಯ ಸುಮಾರಿಗೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪದ ಕಗ್ಗನಹಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಾರೀ ಗಾಳಿ ಮಳೆಗೆ ಗಿರಿಜಾ ಎಂಬವರ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಇದರಿಂದ ಮನೆ ಸಂಪೂರ್ಣ ಜಖಂಗೊಂಡಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲಾ ಜಖಂಗೊಂಡಿದೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಲಿ ಮಾಡಿ ಜೀವನ ಮಾಡುತ್ತಿದ್ದ ಗಿರಿಜಾ ಕುಟುಂಬ ಇದೀಗ ಅತಂತ್ರವಾಗಿದೆ.

 

 ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28  ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News