×
Ad

ಚಿಕ್ಕಮಗಳೂರು: ಮಹಿಳೆಯನ್ನು ಕೊಲೆಗೈದು ಯುವಕ ಆತ್ಮಹತ್ಯೆ

Update: 2025-02-20 11:46 IST

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಯುವಕನೋರ್ವ ಮಹಿಳೆಯನ್ನು ಕತ್ತು ಸೀಳಿ ಕೊಲೆಗೈದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಮಧು ಆತ್ಮಹತ್ಯೆ ಮಾಡಿಕೊಂಡಿರುವ ಕೊಲೆ ಆರೋಪಿಯಾಗಿದ್ದರೆ, ಕೊಲೆಯಾದ ಮಹಿಳೆಯನ್ನು ರಾಮನಗರ ಜಿಲ್ಲೆ ಮೂಲದವರು ಎಂದು ಗುರುತಿಸಲಾಗಿದೆ. ಇಬ್ಬರು ಪ್ರೇಮಿಗಳಾಗಿರಬಹುದು ಪೊಲೀಸರು ಶಂಕಿಸಿದ್ದಾರೆ.

ಮಧು ರಾಮನಗರ ಜಿಲ್ಲೆಯಲ್ಲಿ ಡ್ರೈವರ್ ವೃತ್ತಿ ಮಾಡಿಕೊಂಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇವರಿಬ್ಬರು ಕಾರಿನಲ್ಲಿ ದಾಸರಹಳ್ಳಿಗೆ ಬಂದಿದ್ದಾರೆ. ಕೈಮರ ಸಮೀಪದ ದಾಸರಹಳ್ಳಿ ಹೋಗುವ ರಸ್ತೆಯಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿರುವ ಆರೋಪಿ ಮಧು ಅಲ್ಲೇ ಸಮೀಪದಲ್ಲಿನ ಮರಕ್ಕೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ಬಳಿಕ ಕೊಲೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News